ಬೆಂಗಳೂರು:- ಹೆಂಡತಿ ತವರು ಮನೆಗೆ ಹೋಗಿರೋದು ಖುಷಿ ಆಗಿದೆ ಎಂಬ ಆಟೋ ಚಾಲಕನ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸರ್ ಮದುವೆಗೆ ದರ್ಶನ್ ಬರಲ್ವಾ!? ಡಾಲಿ ಕೊಟ್ಟ ಉತ್ತರ ಹೇಗಿತ್ತು ಗೊತ್ತಾ!?
ನನ್ನ ಹೆಂಡತಿ ತವರು ಮನೆಗೆ ಹೋಗಿರುವುದರಿಂದ ನಾನು ಬಹಳ ಸಂತೋಷವಾಗಿದ್ದೇನೆ ಎಂದು ಬೋರ್ಡ್ವೊಂದನ್ನು ತನ್ನ ಆಟೋದಲ್ಲಿ ಬರೆದು ಹಾಕಿರುವ ಆತ ಅದೇ ಖುಷಿಯಲ್ಲಿ ತನ್ನ ಆಟೋದಲ್ಲಿ ಪ್ರಯಾಣಿಸುವ ಎಲ್ಲ ಪ್ರಯಾಣಿಕರಿಗೂ ಉಚಿತ ಬಿಸ್ಕತ್ ವಿತರಿಸಿದ್ದಾನೆ
ವಿಡಿಯೋವನ್ನು ಆತನ ಪ್ರಯಾಣಿಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ “ಹೆಂಡತಿ ತನ್ನ ಹೆತ್ತವರ ಮನೆಗೆ ಹೋಗಿದ್ದಾಳೆ, ನಾನು ಸಂತೋಷವಾಗಿದ್ದೇನೆ” ಎಂದು ಬರೆಯಲಾಗಿದೆ.
ನೆಟಿಜನ್ಗಳು ಇದನ್ನು ‘ಸ್ವಾತಂತ್ರ್ಯ’ ಎಂದು ಕರೆದಿದ್ದಾರೆ. ಆ ವ್ಯಕ್ತಿ ತಮ್ಮ ಆಟೋದಲ್ಲಿ ಪ್ರಯಾಣಿಸುವವರಿಗೆ ಬ್ರಿಟಾನಿಯಾ ಮಿಲ್ಕ್ ಬಿಕಿಸ್ಗಳನ್ನು ವಿತರಿಸಿದ್ದಾನೆ. ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಕೆಲವರು ಈ ವಿಡಿಯೋಗೆ ಕಮೆಂಟ್ ಮಾಡಿದ್ದಾರೆ.