ಹುಬ್ಬಳ್ಳಿ:- ಇಸ್ಲಾಂ ಧರ್ಮಕ್ಕೆ ಮತಾಂತರ ಆಗಲು ಪತ್ನಿಗೆ ಕಿರುಕುಳ ನೀಡುತ್ತಿದ್ದ ಗಂಡನ ವಿರುದ್ಧ ಪತ್ನಿ ದೂರು ದಾಖಲಿಸಿದ್ದಾರೆ.
ಮದ್ಯಪ್ರಿಯರೇ ಹುಷಾರ್: ಡ್ರಂಕ್ ಆ್ಯಂಡ್ ಡ್ರೈವ್ ಮಾಡುವವರ ವಿರುದ್ಧ ಖಾಕಿ ಸಮರ! ಸಂಗ್ರಹವಾದ ದಂಡ ಎಷ್ಟು!?
ಪತಿ ಶಫಿ ಅಹ್ಮದ್ ಕರ್ನೂಲ್ ವಿರುದ್ಧ ಪತ್ನಿ ಲಕ್ಷ್ಮೀ ಕಿರುಕುಳ ಆರೋಪ ಮಾಡಿದ್ದಾರೆ. ಈ ದಂಪತಿ 2014-15ರಲ್ಲಿ ಪ್ರೀತಿಸಿ ರಿಜಿಸ್ಟರ್ ಮದುವೆಯಾಗಿದ್ದರು. 2017ರಲ್ಲಿ ಅಧಿಕೃತವಾಗಿ ಮದುವೆಯಾಗಿದ್ದರು. ಬಳಿಕ ಶಫಿ ಮತ್ತು ಲಕ್ಷ್ಮೀ ದಂಪತಿ ಹುಬ್ಬಳ್ಳಿಯ ಮಂಟೂರು ರಸ್ತೆ ವಾಸವಾಗಿದ್ದರು.
ಅನಿಲ್ ಎಂಬ ಹೆಸರು ಹೇಳಿ ಶಫಿ ಅಹ್ಮದ್ ಮದುವೆಯಾಗಿದ್ದ. ಶಫಿ ಸುಳ್ಳು ಹೇಳಿ ಮದುವೆಯಾಗಿದ್ದಾನೆಂದು, ಮದುವೆ ಬಳಿಕ ಇಸ್ಲಾಂಗೆ ಮತಾಂತರವಾಗುವಂತೆ ಕಿರುಕುಳ ನೀಡುತ್ತಿರುವುದಾಗಿ ಲಕ್ಷ್ಮೀ ಆರೋಪಿಸಿದ್ದಾರೆ. ಸದ್ಯ ಈ ವಿಚಾರವಾಗಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಗೆ ಲಕ್ಷ್ಮೀ ದೂರು ನೀಡಿದ್ದು, ಸುಳ್ಳು ಹೇಳಿ ವಿವಾಹವಾಗಿರುವುದರಿಂದ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಶಫಿ ಅಹ್ಮದ್ನಿಂದ ಮುಕ್ತಿ ಕೊಡಿಸಬೇಕು ಎಂದು ಲಕ್ಷ್ಮೀ ಮನವಿ ಮಾಡಿದ್ದಾರೆ