ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ಅವರು ಎರಡನೇ ಮಗುವಿಗೆ ತಾಯಿಯಾಗುತ್ತಿದ್ದಾ ರಾ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ಹಂಚಿಕೊಂಡಿರುವ ಫೋಟೋಗಳನ್ನು ವೈರಲ್ ಮಾಡುತ್ತಿದ್ದಾರೆ. 2020ರ ಜನವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿ ದ್ದ ಹಾರ್ದಿಕ್ ಪಾಂಡ್ಯ, ನತಾಶಾ ಸ್ಟಾಂಕೋವಿಕ್ ಜೋಡಿ ಆತ್ಮೀಯರ ಸಮ್ಮುಖದಲ್ಲಿ ವಿವಾಹ ಮಾಡಿಕೊಂಡಿದ್ದಾಗಿ ಘೋಷಣೆ ಮಾಡಿ ದ್ದರು.
ಬಳಿಕ 2020ರ ಜುಲೈನಲ್ಲಿ ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ನತಾಶಾ ಗಂಡು ಮಗುವಿಗೆ ಜನ್ಮ ನೀಡಿದ್ದರು.ಸದ್ಯ ನತಾಶಾ ತಮ್ಮ ಮಗ ಅಗಸ್ತ್ಯ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ನಿನ್ನೆಯಷ್ಟೇ ಪಾಂಡ್ಯ ಬ್ರದರ್ಸ್ ಕುಟುಂಬ ಸದಸ್ಯರೊಂದಿಗೆ ಕ್ರಿಸ್ಮಸ್ ಆಚರಣೆ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಕುಟುಂಬ ಹಾಗೂ ಆಪ್ತ ಗೆಳೆಯರೊಂದಿಗೆ ಇರೋ ಫೋಟೋಗಳನ್ನು ಹಾರ್ದಿಕ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸದ್ಯ ಹಾರ್ದಿಕ್ ಹಂಚಿಕೊಂಡಿರುವ ಫೋಟೋಗಳನ್ನು ನೋಡಿದ ಅಭಿಮಾನಿಗಳು ನತಾಶಾ ಎರಡನೇ ಮಗುವಿನ ತಾಯಿ ಆಗುತ್ತಿದ್ದಾರಾ ಎಂದು ಪ್ರತಿಕ್ರಿಯೆ ನೀಡಿ ಪ್ರಶ್ನೆ ಮಾಡಿದ್ದಾರೆ. ಫೋಟೋದಲ್ಲಿ ನತಾಶಾ ಗುಲಾಬಿ ಬಣ್ಣದ ಸ್ಟ್ರಾಪ್ಲೆಸ್ ಗೌನ್ ಧರಿಸಿ ಕಾಣಿಸಿಕೊಂಡಿದ್ದು, ಈ ವೇಳೆ ಮಗ ಅಗಸ್ತ್ಯನನ್ನು ಎತ್ತಿಕೊಂಡು ಪತ್ನಿಯೊಂದಿಗೆ ಹಾರ್ದಿಕ್ ಪಾಂಡ್ಯ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇದರಲ್ಲಿ ನತಾಶಾ ಅವರ ಬೇಬಿ ಬಂಪ್ ಕಾಣುತ್ತಿದೆ, ಅವರು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆಯೇ ಎಂದು ಕಾಮೆಂಟ್ ಮಾಡಿದ್ದಾರೆ.
