ಹಾರ್ದಿಕ್ ಪಾಂಡ್ಯ ಪವರ್ಗೆ ವಿರಾಟ್ ಕೊಹ್ಲಿಯ ದಾಖಲೆ ಉಡೀಸ್ ಆಗಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಭಾರತ ತಂಡ 15 ರನ್ಗಳ ಜಯ ಸಾಧಿಸಿದೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 12 ರನ್ಗಳಿಸುವಷ್ಟರಲ್ಲಿ ಭಾರತ ತಂಡದ ಟಾಪ್-3 ಬ್ಯಾಟರ್ಗಳು ಪೆವಿಲಿಯನ್ಗೆ ಮರಳಿದ್ದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಶಿವಂ ದುಬೆ ಹಾಗೂ ಹಾರ್ದಿಕ್ ಪಾಂಡ್ಯ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.
ಹಾರ್ದಿಕ್ ಪಾಂಡ್ಯ ಸಿಡಿಲಬ್ಬರದ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದರು. ಇಂಗ್ಲೆಂಡ್ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದ ಪಾಂಡ್ಯ 30 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 53 ರನ್ ಬಾರಿಸಿ 18ನೇ ಓವರ್ನಲ್ಲಿ ಔಟಾದರು.
ಹೀಗೆ ಔಟಾಗುವ ಮುನ್ನ ಹಾರ್ದಿಕ್ ಪಾಂಡ್ಯ ಟಿ20 ಕ್ರಿಕೆಟ್ನಲ್ಲಿ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಅಂದರೆ ಭಾರತದ ಪರ ಟಿ20 ಕ್ರಿಕೆಟ್ನಲ್ಲಿ ಡೆತ್ ಓವರ್ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಇದೀಗ ಪಾಂಡ್ಯ ಪಾಲಾಗಿದೆ
ಇದೀಗ ಇಂಗ್ಲೆಂಡ್ ವಿರುದ್ಧ ಡೆತ್ ಓವರ್ಗಳಲ್ಲಿ ಅಬ್ಬರಿಸುವ ಮೂಲಕ ಹಾರ್ದಿಕ್ ಪಾಂಡ್ಯ ಈ ದಾಖಲೆಯನ್ನು ಮುರಿದಿದ್ದಾರೆ.