ಕೇವಲ ಕ್ಯಾಪ್ಟನ್ಸಿ ಮಾತ್ರವಲ್ಲ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲೂ ಮೋಡಿ ಮಾಡಬಲ್ಲ ಆಟಗಾರ ಹಾರ್ದಿಕ್ ಪಾಂಡ್ಯ. ಒತ್ತಡದ ಸನ್ನಿವೇಶದಲ್ಲಿ ಬೌಲಿಂಗ್ ಮಾಡುವ ಕಲೆ ಇವರಿಗಿದೆ. ಆದ್ರೆ ಇದೀಗ ಹಾರ್ದಿಕ್ ಪಾಂಡ್ಯ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಕಾದಿದೆ. ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಬಲಿಷ್ಠ ಪಡೆಯನ್ನು ರೂಪಿಸಿದೆ. ಈ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಆದರೆ ಮೊದಲ ಮ್ಯಾಚ್ನಲ್ಲಿ ಪಾಂಡ್ಯಗೆ ಕಣಕ್ಕಿಳಿಯಲು ಸಾಧ್ಯವಾಗುವುದಿಲ್ಲ.
ಏಕೆಂದರೆ ಕಳೆದ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ನಾಯಕ ಹಾರ್ದಿಕ್ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿದೆ.
Chanakya Niti: ಜೀವನದಲ್ಲಿ ಬೇಗ ಯಶಸ್ವಿ ಆಗಬೇಕಂದ್ರೆ ಚಾಣಕ್ಯ ಹೇಳಿದ ಈ ಮಾತುಗಳನ್ನು ಅನುಸರಿಸಿ.!
ಈ ಒಂದು ಪಂದ್ಯದ ನಿಷೇಧದ ಶಿಕ್ಷೆ ಈ ಬಾರಿಯ ಐಪಿಎಲ್ನಲ್ಲಿ ಮುಂದುವರೆಯಲಿದೆ. ಅದರಂತೆ ಐಪಿಎಲ್ 2025 ರಲ್ಲಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಪರ ಮೊದಲ ಪಂದ್ಯವಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಮೊದಲ ಮ್ಯಾಚ್ನಲ್ಲಿ ಮುಂಬೈ ಪಡೆಯನ್ನು ಜಸ್ಪ್ರೀತ್ ಬುಮ್ರಾ ಅಥವಾ ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.
ಇನ್ನು ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್ನಿಂದ ಒಬ್ಬ ಫೀಲ್ಡರ್ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.