ಕನ್ನಡ ಚಿತ್ರರಂಗದ ಸ್ಟಾರ್ ಜೋಡಿ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಮನೆಗೆ ಹೊಸ ಸದಸ್ಯನ ಆಗಮನವಾಗಿದೆ. ಸಿಂಹ ಪ್ರಿಯ ಜೋಡಿ ತಮ್ಮ ವಿವಾಹ ವಾರ್ಷಿಕೋತ್ಸವದ ದಿನವೇ ತಮ್ಮ ಚೊಚ್ಚಲ ಮಗುವನ್ನು ಭರಮಾಡಿಕೊಂಡಿದ್ದಾರೆ. ನಟಿ ಹರಿಪ್ರಿಯಾ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಮದುವೆ ಆ್ಯನಿವರ್ಸರಿ ದಿನವೇ (ಜ.26) ಹರಿಪ್ರಿಯಾ ಚೊಚ್ಚಲ ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಮದುವೆಯಾದ ದಿನವನ್ನು ಮತ್ತಷ್ಟು ಸ್ಪೆಷಲ್ ಆಗಿದೆ. ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಜೋಡಿ ದೀಪಾವಳಿ ಹಬ್ಬದ ದಿನವೇ ಅಭಿಮಾನಿಗಳ ಗುಡ್ನ್ಯೂಸ್ ಕೊಟ್ಟಿದ್ದರು. ನಟಿ ಹರಿಪ್ರಿಯಾ ವಿಡಿಯೋವೊಂದನ್ನು ಹಂಚಿಕೊಂಡಾಗ ಅವರು ಗರ್ಭಿಣಿ ಇರಬಹುದು ಎಂದು ಅನೇಕರು ಊಹಿಸಿದ್ದರು.
ಇತ್ತೀಚಿಗಷ್ಟೇ ಹರಿಪ್ರಿಯಾ ಸೀಮಂತ ಅದ್ಧೂರಿಯಾಗಿ ನಡೆದಿತ್ತು. ಕನ್ನಡ ಚಿತ್ರರಂಗದ ಅನೇಕ ನಟ-ನಟಿಯರು ಭಾಗಿಯಾಗಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಜೋಡಿಗೆ ಹಾರೈಸಿದ್ದರು. ಇದೀಗ ಮನೆಗೆ ಮುದ್ದಾದ ಮಗುವನ್ನು ಭರಮಾಡಿಕೊಂಡಿರುವ ಜೋಡಿ ಪೋಷಕರಾದ ಖುಷಿಯನ್ನು ಅನುಭವಿಸುತ್ತಿದ್ದಾರೆ.
ಈ ಸಿಹಿ ಸುದ್ದಿಯನ್ನು ಸ್ವತಃ ವಸಿಷ್ಠ ಸಿಂಹ ಹಂಚಿಕೊಂಡಿದ್ದಾರೆ. ವಿಶೇಷವೆಂದರೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಅವರು ಮದುವೆಯಾದ ದಿನಾಂಕ ಅಂದರೆ ಜನವರಿ 26ರಂದು ಹರಿಪ್ರಿಯಾ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ‘ನಮ್ಮ ಮದುವೆ ದಿನವೇ ಅವನು ಬಂದಿದ್ದಾನೆ’ ಎಂದು ವಸಿಷ್ಠ ಸಿಂಹ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.