ಸ್ಯಾಂಡಲ್ ವುಡ್ ನ ಮುದ್ದಾದ ಜೋಡಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಪೋಷಕರಾದ ಸಂಭ್ರಮದಲ್ಲಿದ್ದಾರೆ. ಇತ್ತೀಚೆಗೆ ಹರ್ಷಿಕಾ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಇದೀಗ ದಂಪತಿ ಕುಟುಂಬ ಸಮೇತ ಕೊಲ್ಲೂರು ಮೂಕಾಂಭಿಕಾ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ನಟಿ ಹರ್ಷಿಕಾ ಪೂಣಚ್ಚ ಹಾಗೂ ನಟ ಭುವನ್ ಪೊನ್ನಣ್ಣ ದಂಪತಿಗೆ ಕೆಲ ತಿಂಗಳ ಹಿಂದಷ್ಟೆ ಮುದ್ದಾದ ಮಗು ಜನಿಸಿದೆ. ಇದೀಗ ಈ ಜೋಡಿ ಕುಟುಂಬದೊಡನೆ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಅವರುಗಳು ಮಗು ಜನಿಸಿದ ಬಳಿಕ ಕೊಲ್ಲೂರು ಮೂಕಾಂಭಿಕೆ ದೇವಾಲಯಕ್ಕೆ ಆಗಮಿಸಿ, ಪೂಜೆ ಮಾಡಿಸುವುದಾಗಿ ಹರಕೆ ಹೊತ್ತಿದ್ದರಂತೆ. ಅದನ್ನು ತೀರಿಸಲೆಂದು ಕುಟುಂಬ ಸದಸ್ಯರ ಜೊತೆ ದೇವಾಲಯಕ್ಕೆ ಆಗಮಿಸಿದ್ದಾರೆ.
ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಅವರುಗಳು ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ವಿವಾಹವಾಗಿದ್ದರು. ಕೊಡವ ಸಂಪ್ರದಾಯದಂತೆ ಮದುವೆ ನಡೆದಿದ್ದು ಚಿತ್ರರಂಗದ ಹಲವು ಗಣ್ಯರು ಮದುವೆ ಕಾರ್ಯದಲ್ಲಿ ಭಾಗಿಯಾಗಿದ್ದರು.
ಭುವನ್ ಪೊನ್ನಣ್ಣ ಮತ್ತು ಹರ್ಷಿಕಾ ಪೂಣಚ್ಚ ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಮುದ್ದಾದ ಹೆಣ್ಣು ಮಗುವನ್ನು ಭರಮಾಡಿಕೊಂಡಿದ್ದಾರೆ.