ಈ ಹಿಂದೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ. ಟೆಸ್ಟ್ ಮಾತ್ರವಲ್ಲದೆ ಏಕದಿನ ಟಿ20 ಕ್ರಿಕೆಟ್ಗೂ ಅಶ್ವಿನ್ ವಿದಾಯ ಹೇಳಿದ್ದಾರೆ. ಇದೀಗ ರವೀಂದ್ರ ಜಡೇಜಾ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಹೌದು ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾಗೆ ಮೇಜರ್ ಸರ್ಜರಿಯಾಗಲಿದೆ. ಈ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಕೂಡ ಇದ್ದಾರಾ ಎಂಬುದೇ ಈಗ ಪ್ರಶ್ನೆ.
Ghee Tea: ತುಪ್ಪದ ಟೀ ಕುಡಿದಿದ್ದೀರಾ..? ಕುಡಿದ್ರೆ ಸಿಗುತ್ತೆ ಈ ಆರೋಗ್ಯ ಲಾಭಗಳು!
ಏಕೆಂದರೆ 36 ವರ್ಷದ ರವೀಂದ್ರ ಜಡೇಜಾ ಈಗಾಗಲೇ ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಇದೀಗ ಭಾರತ ಟೆಸ್ಟ್ ತಂಡದ ಹಿರಿಯ ಆಟಗಾರರಲ್ಲಿ ಜಡೇಜಾ ಕೂಡ ಒಬ್ಬರು. ಹೀಗಾಗಿ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಗೆ ರವೀಂದ್ರ ಜಡೇಜಾ ಅವರನ್ನು ಪರಿಗಣಿಸುವ ಸಾಧ್ಯತೆಯಿಲ್ಲ.
ಈ ಬಗ್ಗೆ ಸ್ಪಷ್ಟ ಸೂಚನೆ ಸಿಕ್ಕ ಹಿನ್ನಲೆಯಲ್ಲಿ ರವೀಂದ್ರ ಜಡೇಜಾ ಕೊನೆಯ ಬಾರಿ ಧರಿಸಿದ ಟೆಸ್ಟ್ ಜೆರ್ಸಿಯ ಫೋಟೋವನ್ನು ಹಂಚಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಜೂನ್ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಟೀಮ್ ಇಂಡಿಯಾದ ಹಿರಿಯ ಆಟಗಾರರು ಹೊರಬೀಳುವುದು ಖಚಿತ. ಈ ಹಿರಿಯರಲ್ಲಿ 36 ವರ್ಷದ ಜಡೇಜಾ ಕೂಡ ಇರಲಿದ್ದಾರಾ ಕಾದು ನೋಡಬೇಕಿದೆ.