ಹಾಸನ: ಜಿಲ್ಲೆಯಲ್ಲಿ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಜಿಲ್ಲಾ ಪಂಚಾಯತ್ ಕಛೇರಿ ಎದುರು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಇದೆ ವೇಳೆ ಸಂಘದ ಅಧ್ಯಕ್ಷೆ ಮಮತಾ ಮಾತನಾಡಿ, ಆಶಾ ಕಾರ್ಯಕರ್ತೆಯರ ಸೇವೆಗಳಿಗೆ ನಿಗದಿಯಾಗಿರುವ ಕೇಂದ್ರದ ಪ್ರೋ ತ್ಸಾಹಧನವು ಆರ್ಸಿಎಚ್ ಪೋರ್ಟಲ್ಗೆ ಲಿಂಕ್ ಮಾಡಿರುವುದ ರಿಂದ ಅವರಿಗೆ ವೇತನ ಸಂಪೂರ್ಣವಾಗಿ ಸಿಗದೆ ಸಾವಿರಾರು ರೂಪಾಯಿ ನಷ್ಟ ಅನುಭವಿಸುತ್ತಿ ರುವ ಹಾಗೂ ಇತರ ವೇತನ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ, ಮೊಬೈಲ್ ಆಧಾರಿತ ಕೆಲಸ ನೀಡುವುದನ್ನು ಕೈಬಿಡುವಂತೆ, ಎನ್ಸಿಡಿ, ಎಸಿಎಫ್, ಟಿಬಿ ಸಂಬಂಧಿತ ಕೆಲಸಕ್ಕೆ ವರ್ಷಗಟ್ಟಲೆ ಪ್ರೋತ್ಸಾಹಧನ ನೀಡದಿರುವ ಮತ್ತು ಆಶಾಗಳನ್ನು ತಮ್ಮದಲ್ಲದ ವಿವಿಧ ಕೆಲಸಗಳಲ್ಲಿ ತೊಡಗಿಸಿಕೊಳ್ಳು ತ್ತಿರುವುದು ಇತರೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವರು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ ಎಂದರು.
ಆರ್.ಸಿ.ಹೆಚ್.(ಆಶಾ ನಿಧಿ) ಪೋರ್ಟಲ್ನಲ್ಲಿ ಇರುವ ಅಗಣಿತ ಸಮಸ್ಯೆಗಳ ಕಾರಣಗಳಿಂದ ಮಾಡಿದ ಹಲವಾರು ಚಟುವಟಿಕೆಗಳಿಗೆ ಹಣ ಬರುತ್ತಿಲ್ಲ. ಕೆಲವು ಕಾಂಪೋನೆಂಟ್ಗಳಿಗೆ ಯಾವುದೇ ಪ್ರೋತ್ಸಾಹಧನ ಇಲ್ಲದೇ ದುಡಿಸಿಕೊಳ್ಳಲಾಗುತ್ತಿದೆ, ಅಲ್ಲದೇ ಇವರಿಗೆ ಇಲಾಖೆಯಿಂದ ಮೊಬೈಲ್ ಹಾಗೂ ಡಾಟಾ ನೀಡದೇ ಇದ್ದರೂ ಮೊಬೈಲ್ ಆಧಾರಿತ ಹತ್ತಾರು ಚಟುವಟಿಕೆಗಳನ್ನು ಮಾಡಿಸಲಾಗುತ್ತಿದೆ. ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಇಲ್ಲ. ಇದರ ಮಧ್ಯೆ ಅವರನ್ನು ದೂರದ ಪ್ರದೇಶಗಳಿಗೆ ಹಲವಾರು ಕೆಲಸಗಳಿಗೆ ನಿಯೋಜಿಸಲಾಗುತ್ತಿದೆ ಎಂದರು.
ಇಂತಹ ಹತ್ತಾರು ಜಿಲ್ಲಾ ಮಟ್ಟದ ಸಮಸ್ಯೆಗಳ ಬಗ್ಗೆ ೩ ತಿಂಗಳಿಗೊಮ್ಮೆ ತಮ್ಮ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಆಶಾ ಕುಂದುಕೊರತೆ ಸಭೆಯನ್ನು ಸಂಘದ ಮುಖಂಡರೊಂದಿಗೆ ನಡೆಸಬೇಕೆಂದು ಸರ್ಕಾರದ ಆದೇಶವಿದ್ದರೂ ನಿಯತವಾಗಿ ಸಭೆಗಳು ನಡೆಯುತ್ತಿಲ್ಲ. ನಡೆದ ಸಭೆಗೆ ಸಂಘದ ಮುಖಂಡರನ್ನು ಕರೆಯುತ್ತಿಲ್ಲ. ಆದ್ದರಿಂದ ತಾವು ಆಶಾ ಕಾರ್ಯಕರ್ತೆಯರ ಈ ಬೇಡಿಕೆಗಳ ಪಟ್ಟಿಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿಯಿಂದ ಮನವಿ ಮಾಡುತ್ತೇವೆ ಎಂದರು.
ಆಶಾ ಕಾರ್ಯಕರ್ತೆಯರ ಸೇವೆಗಳಿಗೆ ನಿಗದಿಯಾಗಿರುವ ಕೇಂದ್ರದ ಪ್ರೋತ್ಸಾಹಧನವು ಮೇಲಿನ ಸಮಸ್ಯೆಗಳ ಕಾರಣಗಳಿಂದ ಮಾಡಿದ ಹಲವಾರು ಚಟುವಟಿಕೆಗಳಿಗೆ ಹಣ ಬರುತ್ತಿಲ್ಲ. ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ನಿಗದಿತ ರುಟೀನ್ ಚಟುವಟಿಕೆಗಳ ನಿಶ್ಚಿತ ಗೌರವಧನ ಮತ್ತು ಆಶಾ ನಿಧಿಯ ಮೂಲಕ ಪಡೆಯುವ ವಿವಿಧ ಚಟುವಟಿಕೆಗಳ ಪ್ರೋತ್ಸಾಹಧನಗಳನ್ನು ಒಟ್ಟು ಗೂಡಿಸಿ ಮಾಸಿಕ ರೂ.೧೫,೦೦೦ ಒಂದೇ ಗೌರವಧನ ನಿಗದಿ ಮಾಡಬೇಕು. ಬಾಕಿಯಿರುವ ಕಳೆದ ಎರಡು ತಿಂಗಳ ಇನ್ಸೆಂಟಿವ್ ಈ ಕೂಡಲೇ ಬಿಡುಗಡೆ ಮಾಡಬೇಕು ಎಂದು ಒಟ್ಟು ೧೬ ಬೇಡಿಕೆಗಳನ್ನು ಮುಂದಿಟ್ಟರು.