ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಈ ಬಾರಿ ಜಿದ್ದಾಜಿದ್ದಿನ ಕಣವಾಗಿ ಇಡೀ ರಾಜ್ಯದ ಗಮನ ಸೆಳೆದಿದೆ. ಜಯದೇವ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ಲಕ್ಷಾಂತರ ಜನರ ಹೃದಯ ಗೆದ್ದಿರೋ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಅಳಿಯ ಡಾ.ಮಂಜುನಾಥ್ ಹಾಲಿ ಸಂಸದ ಡಿಕೆ ಸುರೇಶ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
FRUITS ID: ರೈತರೇ ಗಮನಿಸಿ.. ಬರ ಪರಿಹಾರ ಪಡೆಯಲು ʼʼಫ್ರೂಟ್ಸ್ ಐಡಿʼʼ ಕಡ್ಡಾಯ..!
ಈಗಾಗಲೇ ಎರಡು ಬಾರಿ ಸಂಸದರಾಗಿರುವ ಡಿ.ಕೆ.ಸುರೇಶ್ ಹ್ಯಾಟ್ರಿಕ್ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿದ್ದಾರೆ. ಈ ಮೂಲಕ ಬೆಂಗಳೂರು ಗ್ರಾಮಾಂತರ ಕ್ಷೇತ್ರ ರಾಜಕೀಯ ಶಕ್ತಿ ಕೇಂದ್ರವಾಗಿ ಬದಲಾಗಿಬಿಟ್ಟಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ. ಮಂಜುನಾಥ್ ಮೊದಲ ಬಾರಿಗೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಡಿಕೆ ಸುರೇಶ್ ಕಾಂಗ್ರೆಸ್ನಿಂದ ಮೂರನೇ ಬಾರಿಗೆ ಸ್ಪರ್ಧೆ ಮಾಡ್ತಿದ್ದಾರೆ.