ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನ ಮಂತ್ರಿ ಹಾಗೂ ದೇಶದ ಅತ್ಯಂತ ಹಿರಿಯ ರಾಜಕಾರಣಿ ಹೆಚ್. ಡಿ ದೇವೇಗೌಡ ಅವರು ಇಂದು 92 ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ.
ಈ ಸಂದರ್ಭದಲ್ಲಿ ಇಂದು ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಶಾಸಕರು ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯ ಉಪಾಧ್ಯಕ್ಷರಾದ ಶ್ರೀ ಟಿ.ಎ.ಶರವಣ ರವರ ನೇತೃತ್ವದಲ್ಲಿ ಹೆಚ್. ಡಿ. ದೆವೇಗೌಡ ಅವರ ಜನುಮ ದಿನವನ್ನ ಆಚರಿಸಲಾಯಿತು.
![Demo](https://ainlivenews.com/wp-content/uploads/2023/12/spoorthi-1.jpg)
ಅದಲ್ಲದೆ HD ದೇವೇಗೌಡ ಅವರ ಕಟೌಟ್ ಗೆ 500 ಲೀಟರ್ ಹಾಲಿನ ಅಭಿಷೇಕವನ್ನು ಕೂಡ ಮಾಡಲಾಯಿತು. ಇನ್ನೂ ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು, ಅಧಿಕಾರಿಗಳು ಸೇರಿದಂತೆ ಮತ್ತಿತ್ತರು ಇದ್ದರು ಈಗಾಗಲೇ PM ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ದೇಶದ ಅನೇಕ ಗಣ್ಯರು ಹೆಚ್. ಡಿ ದೇವೇಗೌಡರಿಗೆ ಶುಭ ಹಾರೈಸಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)