ಬೆಂಗಳೂರು:- ಸಂಸದ ಎಚ್ ಡಿ ಕುಮಾರಸ್ವಾಮಿ ಅವರು ಕೊನೆಗೂ ಮಂಡ್ಯ ಗೆದ್ದು ಇಂಡಿಯಾ ಸಚಿವರಾಗಿದ್ದಾರೆ.
36ರ ವಯಸ್ಸಿನಲ್ಲಿ ಕೇಂದ್ರ ಸಚಿವರಾಗಿ ದಾಖಲೆ ಬರೆದ ರಾಮಮೋಹನ್ ನಾಯ್ಡು..!
ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಕುಮಾರಸ್ವಾಮಿ ಸಚಿವರಾಗಿದ್ದಾರೆ. ಈ ಮೂಲಕ ಕುಮಾರಸ್ವಾಮಿ ರಾಷ್ಟ್ರರಾಜಕಾರಣ ಪ್ರವೇಶ ಮಾಡಿದ್ದಾರೆ.
ಕರ್ನಾಟಕದ ಮಂಡ್ಯದಿಂದ ಗೆದ್ದು ಸಂಸತ್ ಪ್ರವೇಶಿಸಿರುವ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಎಂಟು ಜನ ಬಿಜೆಪಿ ನಾಯಕರು ಪ್ರಮಾಣ ಸ್ವೀಕರಿಸಿದ ನಂತರ ಎನ್ ಡಿಎ ಒಕ್ಕೂಟದ ಮಿತ್ರಪಕ್ಷಗಳಲ್ಲಿ ಮೊದಲಿಗರಾಗಿ ಕುಮಾರಸ್ವಾಮಿ ಅವರು ಪ್ರಮಾಣ ಸ್ವೀಕರಿಸಿದರು. ಸಾಂಪ್ರದಾಯಿಕ ಬಿಳಿ ಅಂಗಿ ಪಂಚೆ ಧರಿಸಿದ್ದ ಎಚ್ಡಿಕೆ ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು.
ಕುಮಾರಸ್ವಾಮಿ ಜನಿಸಿದ್ದು 1959ರ ಡಿಸೆಂಬರ್ 16ರಂದು. ತಂದೆ ಪ್ರಭಾವಿ ರಾಜಕಾರಣಿ. ವರ ಗರಡಿಯಲ್ಲೇ ಬೆಳೆದವರು ಕುಮಾರಸ್ವಾಮಿ.ಹಾಸನ ಜಿಲ್ಲೆಯ ಹೊಳೇನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಕುಮಾರಸ್ವಾಮಿ ಜನಿಸಿದರು. ಹೈಸ್ಕೂಲ್ ವಿದ್ಯಾಭ್ಯಾಸವನ್ನು ಬೆಂಗಳೂರಿನ ಎಮ್.ಇ.ಎಸ್ ವಿದ್ಯಾಸಂಸ್ಥೆಯಲ್ಲಿ, ಬೆಂಗಳೂರಿನ ಜಯನಗರದಲ್ಲಿರುವ ವಿಜಯ ಕಾಲೇಜ್ನಲ್ಲಿ ಪಿಯುಸಿಯನ್ನು ಪೂರ್ಣಗೊಳಿಸಿ ನ್ಯಾಷನಲ್ ಕಾಲೇಜ್ನಲ್ಲಿ ಬಿಎಸ್ಸಿ ಪದವಿಯನ್ನು ಪಡೆದುಕೊಂಡವರು. ರಾಜಕೀಯಕ್ಕೆ ಬರುವ ಮುನ್ನ ಸಿನೆಮಾದಲ್ಲಿ ಗುರುತಿಸಿಕೊಂಡವರು. ತಂದೆ ಸಿಎಂ ಆಗಿದ್ದಾಗಲೇ ನಡೆದ ಲೋಕಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಕನಕಪುರದಿಂದ ಗೆದ್ದು ಮೂರು ದಶಕದ ರಾಜಕೀಯ ಜೀವನದ ಅನುಭವ ಹೊಂದಿದ್ದಾರೆ. ಕೇವಲ ರಾಜಕೀಯ ಜೀವನದಲ್ಲಿ ಮಾತ್ರವಲ್ಲದೇ ಸಿನಿಮಾ ರಂಗದಲ್ಲಿಯೂ ಗುರುತಿಸಿಕೊಂಡಿದ್ದಾರೆ.
ಹಲವು ವರ್ಷಗಳ ಕಾಲ ಕನ್ನಡ ಸಿನಿಮಾ ರಂಗದಲ್ಲಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ ಅನುಭವ ಕುಮಾರಸ್ವಾಮಿ ಅವರಿಗೆ ಇದೆ. ಇವರು ಹಲವಾರು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಕುಮಾರಸ್ವಾಮಿ ಅವರು ಮೂಲತಃ ಕೃಷಿಕರು. ಇವರು ತಂದೆಯ ನೆರಳಿನಲ್ಲಿ ರಾಜಕಾರಣಕ್ಕೆ ದುಮುಕಿದರು. ಮೊದಲಿಗೆ ಎಚ್ಡಿಕೆ ಅವರು ತಮ್ಮ 37ನೇ ವಯಸ್ಸಿನಲ್ಲಿ 1996ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶ ಮಾಡಿದ್ದರು. ಅದೇ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 11ನೇ ಲೋಕಸಭೆಯ ಸದಸ್ಯರಾಗಿ ಚುನಾಯಿತರಾದರು.
![](https://ainlivenews.com/wp-content/uploads/2024/01/Ad-Banner-copy-scaled.jpg)