ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಮಾಡಿರುವ ಟೀಕೆಗೆ ನಾನು ಉತ್ತರ ಕೊಡಲ್ಲ. ಏಕೆಂದ್ರೆ ಸುಳ್ಳನ್ನೇ ಬಂಡವಾಳ ಮಾಡಿಕೊಂಡಿರುವ ವ್ಯಕ್ತಿ ಅವರು. ಹೆಚ್.ಡಿ.ಕುಮಾರಸ್ವಾಮಿ ಬರೀ ಸುಳ್ಳೇ ಹೇಳುವುದು. ಮಹಿಳೆಯರು ಉಚಿತವಾಗಿ ಬಸ್ನಲ್ಲಿ ಸಂಚಾರ ಮಾಡುತ್ತಿದ್ದಾರೆ. ಇದು ಕುಮಾರಸ್ವಾಮಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಸಿಎಂ ಐಷಾರಾಮಿ ಜೀವನ ನಡೆಸ್ತಿದ್ದಾರೆ ಎಂದು ಆರೋಪಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿಗೆ ಸುಳ್ಳು ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಬಿಜೆಪಿಯವರು ಕೇವಲ ಸ್ವಾತಂತ್ರ್ಯದ ಫಲಾನುಭವಿಗಳು ಅಷ್ಟೇ. ಸ್ವಾತಂತ್ರ್ಯ ಹೋರಾಟಕ್ಕೆ ಬಿಜೆಪಿಯವರ ಕೊಡುಗೆ ಏನೂ ಇಲ್ಲ. ಬಿಜೆಪಿಯ ಒಬ್ಬ ನಾಯಕರಾದರೂ ಜೈಲಿಗೆ ಹೋಗಿದ್ದಾರಾ? ನೆಹರು ಟೀಕೆ ಮಾಡುವುದನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ಬಿಜೆಪಿಗರು ಪ್ರಜಾಪ್ರಭುತ್ವ, ಸಂವಿಧಾನಕ್ಕೆ ವಿರೋಧವಾಗಿದ್ದವರು. ನನ್ನ ಪ್ರಕಾರ ದೇಶ ಆಳುವುದಕ್ಕೆ ಬಿಜೆಪಿಗೆ ಅರ್ಹತೆಯೇ ಇಲ್ಲ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.