ಬೆಂಗಳೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ 64ನೇ ಹುಟ್ಟುಹಬ್ಬ ಆಚರಣೆಗೆ ಇಂದು ರಾಜ್ಯದ ಗಣ್ಯವ್ಯಕ್ತಿಗಳಿಂದ ಶುಭಾಶಯದ ಮಾಹಾಪೂರವೇ ಹರಿದು ಬಂದಿತ್ತು ಈ ಹಿನ್ನೆಲೆಯಲ್ಲಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಎಲ್ಲರಿಗೂ ಟ್ವೀಟ್ ಮಾಡುವ ಮೂಲಕ ಧನ್ಯವಾದಗಳನ್ನ ತಿಳಿಸಿದ್ದಾರೆ.
ಮೋದಿ ಅವರಿಗೆ ಧನ್ಯವಾದ ತಿಳಿಸಿದ ಮಾಜಿ ಮುಖ್ಯಮಂತ್ರಿ ಅವರು ಹಾಗೆ ತಮಗೆ ತುಂಬು ಹೃದಯದ ಧನ್ಯವಾದಗಳು ಸರ್. ನಿಮ್ಮ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಚಿರಋಣಿ ಆಗಿದ್ದೇನೆ ಎಂದು ಕುಮಾರಸ್ವಾಮಿ ಅವರು ಕೃತಜ್ಞತೆ ಸಲ್ಲಿಸಿದರು.
ಹಾಗೆ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ.ದೇವೇಗೌಡರು ಕುಮಾರಸ್ವಾಮಿ ಅವರನ್ನು ಹರಿಸಿದ್ದಾರೆ.
ನನ್ನ ಪುತ್ರ, ಮಾಜಿ ಮುಖ್ಯಮಂತ್ರಿಗಳು ಹಾಗು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು.
ಭಗವಂತ ನಿಮಗೆ ಉತ್ತಮ ಆರೋಗ್ಯ, ಆಯುಷ್ಯ ಕರುಣಿಸಿ ಸುಧೀರ್ಘ ಅವಧಿ ಜನಸೇವೆ ಮಾಡುವ ಅವಕಾಶವನ್ನು ನೀಡಲಿ ಎಂದು ಹಾರೈಸುತ್ತೇನೆ. ಶುಭವಾಗಲಿ.
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಸಿಎಂ ಗಳಾದ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಸಚಿವ ಎಂ.ಬಿ.ಪಾಟೀಲ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಡಿಸಿಎಂ ಡಾ. ಸಿಎನ್ ಅಶ್ವತ್ಥನಾರಾಯಣ, ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಸಿ.ಟಿ.ರವಿ, ಸಂಸದರಾದ ಜಿಎಂ ಸಿದ್ದೇಶ್ , ಪ್ರತಾಪ್ ಸಿಂಹ, ನಳೀನ್ ಕುಮಾರ್ ಕಟೀಲ್, ಜಗ್ಗೇಶ್, ಬಿ.ವೈ.ರಾಘವೇಂದ್ರ, ಅಣ್ಣಾ ಸಾಹೇಬ್ ಜೊಲ್ಲೆ, ಪ್ರಭಾಕರ್ ಕೋರೆ, ಸಚಿವೆ ಶಶಿಕಲಾ ಜೊಲ್ಲೆ, ಮಾಜಿ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಅನೇಕ ಗಣ್ಯರು ಮಾಜಿ ಮುಖ್ಯಮಂತ್ರಿ ಅವರಿಗೆ ಶುಭ ಕೋರಿದ್ದಾರೆ.