ನವದೆಹಲಿ:- ಬಿಜೆಪಿ ಜತೆ ಪಾದಯಾತ್ರೆ ಮಾಡಲು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಷರತ್ತು ಹಾಕಿದ್ದಾರೆ.
ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ ವಿರುದ್ಧ ಮಂಗಳವಾರ ಕಿಡಿ ಕಾರಿದ್ದ ಹೆಚ್ಡಿ ಕುಮಾರಸ್ವಾಮಿ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ಇಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.
ಇಂದಿನಿಂದ ನಿಮ್ಮ ಬ್ರ್ಯಾಂಡೆಡ್ ಸ್ಲಿಪ್ಪರ್ ಬೆಲೆ ಏರಿಕೆ: ಈಗಿರುವ ಹಳೆ ಪಾದರಕ್ಷೆಗಳು ಏನಾಗುತ್ತವೆ?
ಈ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆಪಿ ನಡ್ಡಾ ಅವರು ದೂರವಾಣಿ ಮೂಲಕ ಹೆಚ್ಡಿಕೆ ಜೊತೆ ಮಾತನಾಡಿ ಪಾದಯಾತ್ರೆಯಲ್ಲಿ ಭಾಗಿಯಾಗುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಪ್ರೀತಂಗೌಡ ಪಾದಯಾತ್ರೆಗೆ ಬಾರದೇ ಇದ್ದರೆ ನಾನು ಭಾಗಿಯಾಗುತ್ತೇನೆ ಎಂದು ಷರತ್ತು ವಿಧಿಸಿದ್ದಾರೆ.
ಮಂಗಳವಾರ ದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಾ ಖಾರವಾಗಿ ಪ್ರತಿಕ್ರಿಯಿಸಿದ ಹೆಚ್ಡಿಕೆ, ದೇವೇಗೌಡರ ಕುಟುಂಬವನ್ನು ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆಗೆ ಕರೆಯುತ್ತೀರಾ? ಪೆನ್ ಡ್ರೈವ್ ಗಳನ್ನು ಹಂಚಿವರು ಯಾರು ಎಂದು ಗೊತ್ತಿಲ್ಲವೇ? ಚುನಾವಣಾ ಮೈತ್ರಿಯೇ ಬೇರೆ. ರಾಜಕೀಯವೇ ಬೇರೆ ಎಂದು ಕಿಡಿಕಾರಿದರು.