ಬೆಂಗಳೂರು:- ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಬಂಧನ ಭೀತಿ ಎದುರಾಗಿದೆ. ಸಂತ್ರಸ್ತೆ ತನ್ನ ಹೇಳಿಕೆಯಲ್ಲಿ ಭವಾನಿ ರೇವಣ್ಣರ ಹೆಸರು ಉಲ್ಲೇಖಿಸಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಭವಾನಿಗೆ ನೋಟಿಸ್ ನೀಡಿದ್ದರು. ಇದೀಗ ಬೆಂಗಳೂರಿನ ಸೆಷನ್ಸ್ ಕೋರ್ಟ್ನಲ್ಲಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ.
Parameshwer: ಪ್ರಜ್ವಲ್ ರೇವಣ್ಣರ ನಿರ್ಧಾರ ಸ್ವಾಗತಿಸುತ್ತೇನೆ – ಸಚಿವ ಪರಮೇಶ್ವರ್!
ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್ಗೆ ಭವಾನಿ ರೇವಣ್ಣ ಅರ್ಜಿ ಹಾಕಿದ್ದರು. ಕೆಆರ್ ನಗರದ ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ಇದೇ ಕಾರಣಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿ ಈಗಾಗಲೇ ಏಳು ಜನರನ್ನ ಬಂಧಿಸಿತ್ತು. ಈ ಪೈಕಿ ಹೆಚ್ಡಿ ರೇವಣ್ಣಗೆ ಮಾತ್ರ ಜಾಮೀನು ಸಿಕ್ಕಿದೆ. ಇದೀಗ ಇಂದು ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ.
ಸಂತ್ರಸ್ತೆ ತನ್ನ ಹೇಳಿಕೆಯಲ್ಲಿ ಭವಾನಿ ರೇವಣ್ಣರ ಹೆಸರು ಉಲ್ಲೇಖಿಸಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಸತೀಶ್ ಬಾಬು ಹೇಳಿಕೆ ದಾಖಲಿಸಿಕೊಂಡಿರುವ ಎಸ್ಐಟಿ, ಆತನ ಮೊಬೈಲ್ ವಶಕ್ಕೆ ಪಡೆದು ಕಾಲ್ ಡೀಟೆಲ್ಸ್ ಸಹ ಪರಿಶೀಲನೆ ಮಾಡಲಾಗಿದೆ.