ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ. ಮುಡಾ ಹಗರಣ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದರು.
Guranntee Scheme: ಸರ್ಕಾರದಿಂದ ಮಹತ್ವದ ತೀರ್ಮಾನ : ಬಜೆಟ್ನಲ್ಲಿ ಮೀಸಲಿಟ್ಟ ಹಣ ಗ್ಯಾರಂಟಿಗೆ ಬಳಕೆ!
ಮುಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ್ ಕೈವಾಡವಿದೆ ಎಂಬ ಎಚ್ಡಿಕೆ ಆರೋಪದ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲವೊಬ್ಬರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ ಎಂದು ತಿರುಗೇಟು ನೀಡಿದರು.
School Visit: ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಸಪ್ರೈಸ್ ವಿಸಿಟ್: ಮಕ್ಕಳಿಗೆ ವ್ಯಾಕರಣ ಪಾಠ ಮಾಡಿದ ಸಿದ್ದು!
ಮಂಡ್ಯದಲ್ಲಿ ತಾವು ಮಾಡುತ್ತಿರುವ ಜನತಾ ದರ್ಶನಕ್ಕೆ ಅಧಿಕಾರಿಗಳು ಹೋಗಬಾರದೆಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ ಎಂಬ ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿ, ಜನರನ್ನು ಇಟ್ಟುಕೊಂಡು ಜನತಾ ದರ್ಶನ ಮಾಡಲಿ. ಹಳ್ಳಿ, ಹಳ್ಳಿ ತಿರುಗಲಿ, ಯಾರು ಬೇಡ ಎಂದು ಹೇಳಿದ್ದಾರೆ. ಅಧಿಕಾರಿಗಳು ಶಿಷ್ಟಾಚಾರ ಪಾಲಿಸುತ್ತಾರೆ.