ಮೈಸೂರು: ಸ್ಪೀಕರ್​ ಸ್ಥಾನದ ಬಗ್ಗೆ ಸಚಿವ ಜಮೀರ್ ಅಹ್ಮದ್ ಹೇಳಿಕೆ ವಿಚಾರ ಸಂಬಂಧ ಸಚಿವ ಜಮೀರ್​ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತೆ ಎಂದು ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು. ಇದು ಪ್ರಜಾಪ್ರಭುತ್ವ, ಸಂವಿಧಾನ, ದಲಿತ ವಿರೋಧಿ ಹೇಳಿಕೆ.

ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಕೇಸ್: ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ

ಸಚಿವ ಜಮೀರ್ ತಮ್ಮ ಮನದಾಳದ ಮಾತು ಹೊರಹಾಕಿದ್ದಾರೆ. ನ್ಯಾಯದೇವತೆಯ ಗೌರವಕ್ಕೂ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಬೇರೆ ಸಿಎಂ ಆಗಿದ್ದರೆ ಇಷ್ಟೊತ್ತಿಗೆ ಜಮೀರ್​ ರಾಜೀನಾಮೆ ಪಡೆಯುತ್ತಿದ್ರು. ಈ ಸರ್ಕಾರ ಜಮೀರ್​ ಹೇಳಿಕೆ ಖಂಡಿಸುವ ಕೆಲಸ ಕೂಡ ಮಾಡಿಲ್ಲ ಎಂದರು.

Share.