ಟೀಮ್ ಇಂಡಿಯಾದ ಕ್ಲಾಸ್ ಆಟಗಾರ ವಿರಾಟ್ ಕೊಹ್ಲಿ ಆಧುನಿಕ ಕ್ರಿಕೆಟ್ ಜಗತ್ತಿನ ಶ್ರೇಷ್ಠ ಬ್ಯಾಟರ್ ಎಂದು ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಮುಕ್ತ ಕಂಠದಿಂದ ಗುಣಗಾನ ಮಾಡಿದ್ದಾರೆ.
ಶ್ರೀಲಂಕಾದಲ್ಲಿ ನಡೆಯುತ್ತಿರುವ ಐಎಲ್ ಟಿ20 ಟೂರ್ನಿಯಲ್ಲಿ ಬ್ರಾಂಡ್ ಅಂಬಾಸಿಡರ್ ಹಾಗೂ ವೀಕ್ಷಕ ವಿವರಣೆಕಾರರಾಗಿರುವ ರಾವಲ್ಪಿಂಡಿ ಎಕ್ಸ್ ಪ್ರೆಸ್ ಶೋಯೆಬ್ ಅಖ್ತರ್ ಅವರು ವಿರಾಟ್ ಕೊಹ್ಲಿಯನ್ನು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರೊಂದಿಗೆ ಹೋಲಿಸಿದ್ದಾರೆ. ಕೊಹ್ಲಿ ಆಧುನಿಕ ಕ್ರಿಕೆಟ್ ನ ಶ್ರೇಷ್ಠ ಬ್ಯಾಟರ್ ಎಂದು ಶ್ಲಾಘಿಸಿದ್ದಾರೆ.
ಸಚಿನ್ ತೆಂಡೂಲ್ಕರ್ ಅವರು ತಮ್ಮ ವೃತ್ತಿ ಜೀವನದಲ್ಲಿ ರನ್ ಗಳ ಶಿಖರ ನಿರ್ಮಿಸಿದ್ದಾರೆ. ರಿಕಿ ಪಾಂಟಿಂಗ್ , ಬ್ರಿಯಾನ್ ಲಾರಾರೊಂದಿಗೆ ಸಚಿನ್ ಕೂಡ ಶ್ರೇಷ್ಠ ಆಟಗಾರರಾಗಿ ಗುರುತಿಸಿಕೊಂಡಿದ್ದರು. ಶೇನ್ ವಾರ್ನ್ ಹಾಗೂ ವಾಸಿಮ್ ಅಕ್ರಮ್ ಕೂಡ ಸರ್ವಶ್ರೇಷ್ಠ ಬೌಲರ್ ಗಳಾಗಿದ್ದರು. ಆದರೆ ಇಂದಿನ ಸ್ಪರ್ಧಾತ್ಮಕ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಉತ್ತಮ ಬ್ಯಾಟ್ಸ್ ಮನ್ ಆಗಿ ಗುರುತಿಸಿಕೊಂಡಿದ್ದಾರೆ,” ಎಂದು ಪಾಕ್ ಮಾಜಿ ವೇಗಿ ಹೇಳಿದ್ದಾರೆ.
“ವಿರಾಟ್ ಕೊಹ್ಲಿ ಭವಿಷ್ಯದಲ್ಲಿ ಹಲವು ಕಠಿಣ ಸವಾಲುಗಳನ್ನು ಎದುರಿಸಲಿದ್ದಾರೆ. ಆದರೆ ಆತ ಈಗಾಗಲೇ ಸಾಕಷ್ಟು ರನ್ ಗಳಿಸಿದ್ದಾನೆ. ನಾವು ಕೂಡ ಇದೇ ರೀತಿಯ ಸವಾಲನ್ನು ಎದುರಿಸಿದ್ದೆವು. ವಾಸಿಮ್ ಅಕ್ರಮ್ ಎದುರು ರನ್ ಗಳಿಸುವುದು ಬ್ಯಾಟರ್ ಗಳಿಗೆ ಸುಲಭವಾಗಿರಲಿಲ್ಲ. ಆದರೆ ವಿರಾಟ್ ಕೊಹ್ಲಿಗೆ ಕೊಹ್ಲಿಯೇ ಸಾಟಿಯಾಗಿದ್ದಾರೆ. ಆಧುನಿಕ ಕ್ರಿಕೆಟ್ ಜಗತ್ತಿನಲ್ಲಿ ಆತ ಅತ್ಯುತ್ತಮ ಬ್ಯಾಟರ್ ಆಗಿದ್ದಾರೆ.