ವಂಚನೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಸುಕೇಶ್ ಚಂದ್ರಶೇಖರ್, ಜೈಲಿನಿಂದಲೇ (Jail) ತಮಗೆ ಬೆದರಿಕೆ ಹಾಕುತ್ತಿದ್ದಾನೆ ಎಂದು ಜಾಕ್ವೆಲಿನ್ ಆರೋಪ ಮಾಡಿದ್ದಾರೆ. ಜೈಲಿನಿಂದ ಜಾಕ್ವೆಲಿನ್ ಗೆ ಪ್ರೇಮ ಪತ್ರ ಕಳುಹಿಸುತ್ತಿದ್ದರು. ಇದೀಗ ಬೆದರಿಕೆಯ ಪತ್ರ ಬರೆಯುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ತನ್ನ ವಿರುದ್ಧ ಕ್ರಮಕ್ಕೆ ಮುಂದಾದರೆ, ನಿನ್ನ ಬಣ್ಣ ಬಯಲು ಮಾಡುವುದಾಗಿ ತಿಳಿಸಿರುವುದಾಗಿ ಹೇಳಿಕೊಂಡಿದ್ದಾರೆ.
ಅಷ್ಟಕ್ಕೂ ಸುಕೇಶ್ ಇಷ್ಟೊಂದು ಗರಂ ಆಗೋಕೆ ಕಾರಣ, ಜಾಕ್ವೆಲಿನ್ ಕಾನೂನು ಕ್ರಮಕ್ಕೆ ಮುಂದಾಗಿರೋದು. ಮೊನ್ನೆಯಷ್ಟೇ ಬಹುಕೋಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಬೇಕು ಎಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಕೋರ್ಟ್ ಮೆಟ್ಟಿಲು ಏರಿದ್ದರು. ಸುಕೇಶ್ ಚಂದ್ರಶೇಖರ್ (Sukesh Chandrasekhar) ಮಾಡಿದ್ದಾರೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದರು. ಇದೀಗ ಸುಕೇಶ್ ವಿರುದ್ಧ ಮತ್ತೆ ಜಾಕ್ವೆಲಿನ್ ಕೋರ್ಟ್ ಮೆಟ್ಟಿಲು ಏರುತ್ತಿದ್ದಾರೆ.
ಜಾಕ್ವೆಲಿನ್ ಗೆ ಸಂಬಂಧಿಸಿದಂತೆ ಸುಕೇಶ್ ತಿಂಗಳಿಗೊಂದಾದರೂ ಮಾಧ್ಯಮ ಹೇಳಿಕೆಯನ್ನು ನೀಡುತ್ತಿದ್ದಾನೆ. ಇನ್ನೂ ಜಾಕ್ವೆಲಿನ್ ಅನ್ನು ಪ್ರೀತಿಸುತ್ತಿರುವುದಾಗಿ ಸುಕೇಶ್ ಹೇಳಿಕೊಂಡಿದ್ದಾರೆ. ಹುಟ್ಟು ಹಬ್ಬಕ್ಕೆ, ಹಬ್ಬ ಹರಿದಿನಗಳಿಗೆ ಪ್ರೇಮ ಸಂದೇಶವನ್ನು ಕಳುಹಿಸುತ್ತಲೇ ಇದ್ದಾನೆ. ಇದನ್ನು ತಡೆಗಟ್ಟಬೇಕು ಎಂದು ನಟಿ ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ.