ಬೆಂಗಳೂರು:– ಸಚಿವ ಜಮೀರ್ ಅಹ್ಮದ್ ವಿರುದ್ಧ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತೊಡೆತಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಅವರಿಗೆ ಅವರ ಧರ್ಮದ ಬಗ್ಗೆ ಅಷ್ಟು ಅಭಿಮಾನ ಇದೆ. ನಮ್ಮ ಧರ್ಮದ ಧರ್ಮಾಭಿಮಾನಕ್ಕೆ ನಾನು ಭಯಪಡುತ್ತೀನಾ. ಹಾಕುವ ಸಮಯ ಬಂದರೆ ದತ್ತಮಾಲೆ ಹಾಕುತ್ತೇನೆ ಎಂದರು.
ದತ್ತಮಾಲೆ ಯಾಕೆ ಹಾಕಬಾರದು? ದೇವರ ಕಾರ್ಯಕ್ರಮ ಹಾಕುವ ಸಮಯ ಬಂದರಡ ಹಾಕುತ್ತೇನೆ. ಕಾನೂನು ಬಾಹಿರವಾಗಿ ಯಾವುದನ್ನೂ ಮಾಡುವುದಿಲ್ಲ. ನಮ್ಮ ಸಂಸ್ಕೃತಿ ಉಳಿಸಲು ಕಾನೂನಾತ್ಮಕವಾಗಿ ಏನು ಬೇಕಾದರೂ ಮಾಡುತ್ತೇನೆ ಎಂದು ಹೇಳಿದರು.
ಕರೆಂಟ್ ಕಳ್ಳತನದ ಆರೋಪದ ಬಗ್ಗೆ ಮಾತನಾಡಿದ ಅವರು, ನೀವು ದರೋಡೆ ಮಾಡಿಕೊಂಡು ಕೂತಿದ್ದೀರಾ. ಕೂಲಿ ಮಾಡುವವನು ತಿಳಿಯದೇ ಮಾಡಿದ್ದಾನೆ. ನನಗೆ ಗೊತ್ತಿಲ್ಲ ಅನ್ನಬಹುದಿತ್ತು, ನಾನು ಹಾಗೆ ಹೇಳಿಲ್ಲ. ಶೋಭಾ ಅಪಾರ್ಟ್ಮೆಂಟ್ ಕಟ್ಟಿದ್ದಾರೆ. ರಾಜೇಂದ್ರ ಚೋಳನ್ ಅದೇ ಅಪಾರ್ಟ್ಮೆಂಟ್ನಲ್ಲಿ ಇದ್ದ. ಅದಕ್ಕೆ ಆರು ತಿಂಗಳು ಎಷ್ಟು ಬಿಲ್ ಬಂದಿದೆ ಕೇಳಿ. ಆತ ಬೆಸ್ಕಾಂ ಎಂ.ಡಿ ಆಗಿದ್ದ, ಅದಕ್ಕೆ ಬಿಲ್ ಎಷ್ಟು ಬಂತು ಎಂದು ಪ್ರಶ್ನಿಸಿದರು.
ಇನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಪರೋಕ್ಷವಾಗಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಟೆಂಟಲ್ಲಿ ಬ್ಲೂ ಫಿಲಂ ತೋರಿಸಿಕೊಂಡು ಜೀವನ ಮಾಡಿಕೊಂಡು ಬಂದವನು. ಆ ಮನಸ್ಥಿತಿಯಲ್ಲಿ ಅವನಿಗೆ ಇನ್ನೇನು ಬರುತ್ತದೆ. ಆತ ಆ ರೀತಿ ಪೋಸ್ಟರ್ ಪ್ರಿಂಟ್ ಮಾಡಿಸುವುದು ಬಿಟ್ಟು ದೇವರದ್ದು ಹಾಕಿಸುತ್ತಾನಾ…? ದೊಡ್ಡ ಆಲದಹಳ್ಳಿಯ ಸಾತನೂರಿನಲ್ಲಿ 2 ಟೆಂಟ್ ಇದ್ವಲ್ಲಾ, ಮಳಿಯಾಳಿ ಸಿನಿಮಾಗೆ ಕಟ್ಟಿಂಗ್ ಸೇರಿಸುತ್ತಿದ್ದರಲ್ಲ. ಅದನ್ನೇ ಮುಂದುವರೆಸುತ್ತಿದ್ದಾರೆ ಅವರು ಬಂದಿರುವುದೇ ಆ ಸಂಸ್ಕೃತಿಯಲ್ಲಿ. ಅಂತವರನ್ನ ಈ ರಾಜ್ಯದ ಜನ ಆಯ್ಕೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ನವರು ಅಂತವರಿಗೆ ಅಧಿಕಾರ ನೀಡಿದ್ದಾರೆ. ಅವರ ಜೀವನ, ಸಂಸ್ಕೃತಿ, ಬದುಕೇ ಅಷ್ಟು..ಏನು ಮಾಡುವುದು ಎಂದು ವ್ಯಂಗ್ಯವಾಡಿದರು.