ಬೆಂಗಳೂರು:– ಚೀನಾದಲ್ಲಿ ಆರ್ಭಟಿಸಿ ಬೊಬ್ಬಿರಿಯುತ್ತಿರುವ ಎಚ್ಎಂಪಿವಿ ಸೋಂಕು ಭಾರತಕ್ಕೂ ಕಾಲಿಟ್ಟಿದ್ದೂ ಜನತೆ ಆತಂಕಕ್ಕೊಳಗಾಗಿದ್ದಾರೆ. ಅಲ್ಲದೇ ಆಸ್ಪತ್ರೆಯತ್ತ ಪರೀಕ್ಷೆಗೆಂದು ಜನರು ಹೋಗುತ್ತಿದ್ದಾರೆ.
6 ಮಕ್ಕಳ ಆಂಟಿ ಭಿಕ್ಷುಕನೊಂದಿಗೆ ಪರಾರಿ: ಈ ಮಹಾತಾಯಿ ಮಾಡಿದ್ದು ಸರೀನಾ!?
ಕರ್ನಾಟಕದಲ್ಲಿ ಎಚ್ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದು ಆರೋಗ್ಯ ಇಲಾಖೆ ಆಸ್ಪತ್ರೆಗೆ ಹೋಗುವವರಿಗೆ ಸೂಚನೆ ನೀಡಿದೆ. ಜತೆಗೆ, ಖಾಸಗಿ ಲ್ಯಾಬ್ ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ಇಲಾಖೆ ನಿಗಾ ಇಡುವುದಾಗಿ ತಿಳಿಸಿದೆ. ಎಚ್ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳಿ ಎನ್ನುವವರ ಮೇಲೆ ಹದ್ದಿನ ಕಣ್ಣು ಇಡಲು ನಿರ್ಧರಿಸಿದೆ. ಜ್ವರ, ಕೆಮ್ಮು ಎಂದು ಆಸ್ಪತ್ರೆಗೆ ಹೋಗುವವರು ಎಚ್ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಇಲಾಖೆ ಹೇಳಿದೆ
ಈ ವಿಚಾರವಾಗಿ ಇಂದು ಸಂಜೆಯೊಳಗೆ ಆರೋಗ್ಯ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಲಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ಎಚ್ಎಂಪಿವಿ ವೈರಸ್ ಟೆಸ್ಟ್ಗೆ 10 ಸಾವಿರ ರೂ.ನಿಂದ 12 ಸಾವಿರ ರೂ. ದರ ಇದೆ. ಹೀಗಾಗಿ ಟೆಸ್ಟಿಂಗ್ ಅಗತ್ಯ ಇಲ್ಲ ಎಂದು ಇಲಾಖೆ ಪ್ರಕಟಣೆ ಹೊರಡಿಸಲಿದೆ ಎಂದು ಮೂಲಗಳು ಹೇಳಿವೆ.