ಬೆಂಗಳೂರು:- ಹೃದಯಾಘಾತ ಹಿನ್ನೆಲೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ತಜ್ಞ ವೈದ್ಯರಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ ಎಂದು ತಿಳಿದುಬಂದಿದೆ.
ಬುಧವಾರ ಸಂಜೆ ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಲಘು ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಶಾಸಕರಿಗೆ ಆಂಜಿಯೋಪ್ಲಾಸ್ಟಿ ಮಾಡಿ ಚಿಕಿತ್ಸೆ ಮುಂದುವರೆಸಿದ್ದಾರೆ.