ಮೈಸೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಎಲ್ಲರಲ್ಲೂ ಹೆಚ್ಚಾಗುತ್ತಲೇ ಇದೆ. ಚಿಕ್ಕವಯಸ್ಸಿನಿಂದ ಹಿಡಿದು ದೊಡ್ಡವವರೆಗೂ ಹೃದಯಾಘಾತ ಸಮಸ್ಯೆ ಹೆಚ್ಚುತ್ತಾ ಇದೆ. ಅದರಲ್ಲೂ ಶಾಲೆಗೆ ಹೋಗುವ ಪುಟ್ಟ ಪುಟ್ಟ ಮಕ್ಕಳನ್ನೂ ಹೃದಯಾಘಾತ ಬಿಡದೇ ಕಾಡುತ್ತಿದೆ.
ಇದೀಗ ಎಸ್ಎಸ್ಎಲ್ಸಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಹೌದು ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಹೃದಯಾಘಾತದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ.
Chanakya Niti: ವಿವಾಹಿತ ಪುರುಷರು ಬೇರೆ ಮಹಿಳೆಯಗೆ ಆಕರ್ಷಿತರಾಗೋದ್ಯಾಕೆ..? ಚಾಣಕ್ಯ ನೀಡಿದ 5 ಕಾರಣಗಳು ಇಲ್ಲಿದೆ
ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದು, ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೀಪಿಕಾ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವು ಸಂಭವಿಸಿದೆ. ಇನ್ನೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.