ಬೆಂಗಳೂರು: ನೀರಿನ ಸಂಪ್’ಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಕೆ.ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ನಗರದಲ್ಲಿ ನಡೆದಿದೆ. ಸುಬೀನ್ ಸಾವನ್ನಪ್ಪಿರುವ ಬಾಲಕನಾಗಿದ್ದು, ನೇಪಾಳ ಮೂಲದ ಸುಬೀನ್ ಸಾವನ್ನಪ್ಪಿರುವ ಬಾಲಕ. ನೇಪಾಳ ಮೂಲದ ದಂಪತಿ ಇಲ್ಲಿ ನೆಲೆಸಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು.
Railway Jobs: ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ..! ತಿಂಗಳಿಗೆ 56,000 ಸಂಬಳ
ಕೆಲಸದಿಂದ ಬಂದು ಮಗು ಕಾಣದೇ ಇದ್ದಾಗ ತಂದೆ ತಾಯಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಸಂಪಿನಲ್ಲಿ ಮಗು ಬಿದ್ದಿರೋದು ಪತ್ತೆಯಾಗಿದೆ. ಕೂಡಲೇ ಕೆಆರ್ಪುರ ಸರ್ಕಾರಿ ಆಸ್ಪತ್ರೆ ದಾಖಲು ಮಾಡಲಾಗಿದೆ. ಆ ವೇಳೆಗೆ ಮಗು ಸಾವನ್ನಪ್ಪಿರೋದು ಗೊತ್ತಾಗಿದೆ. ಕೆಆರ್ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)