ಕಾವೇರಿ ನದಿ ನೀರಿನ ಹರಿವು ಹೆಚ್ಚಳ ಹಿನ್ನೆಲೆ ನದಿ ಪಾತ್ರದ ಗ್ರಾಮಗಳಿಗೆ ಭಾರೀ ಪ್ರಮಾಣದ ನೀರು ನುಗ್ಗಿದೆ. ಇಲ್ಲಿನ ಮನೆ, ಜಮೀನುಗಳಿಗೆ ನೀರು ನುಗ್ಗಿದೆ. 9 ಗ್ರಾಮಗಳಲ್ಲಿ ಇಂದು ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾಗು ಇತರ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಗ್ರಾಮಸ್ಥರು ನೀರಿನ ಬಳಿ ಹೋಗದಂತೆ ಎಚ್ಚರಿಕೆ ವಹಿಸಲು ಸಿಬ್ಬಂದಿ ನಿಯೋಜಿಸಲಾಗಿದೆ. ಸಂಭವನೀಯ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದ್ದು, ದೋಣಿಗಳು ಸೇರಿದಂತೆ ರಕ್ಷಣಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.