ಬೆಂಗಳೂರು:- ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇನ್ನೂ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಂತೆಯೇ ಮೋಡ ಕವಿದ ವಾತಾವರಣ ಇರಬಹುದು.
ಬೆಂಗಳೂರಲ್ಲೂ ಸಹ ಮುಂಜಾನೆ ತುಂಬಾ ಚಳಿ ಇರುತ್ತೆ. ಇವತ್ತು ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ತುಂತುರು ಮಳೆಯಾಗಬಹುದು.
ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ಮೈಸೂರಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು, ಬೆಳಗಾವಿ, ಶಿವಮೊಗ್ಗ, ಬೀದರ್, ಚಾಮರಾಜನಗರ, ಹಾವೇರಿ, ಬಾಗಲಕೋಟೆಯಲ್ಲಿ ಮಳೆ ಸಾಧ್ಯತೆ ಇದೆ.
ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಅತಿ ಕಡಿಮೆ ಉಷ್ಣಾಂಶ ಇರಲಿದೆ. 13.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಚಳಿ ಮುಂದುವರೆಯಲಿದೆ. ಕೆಲವೆಡೆ ಚಳಿ ಇದ್ರೆ, ಕೆಲವೆಡೆ ಮಳೆ ಇರಲಿದೆ. ಕೆಲ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.