ಬೆಂಗಳೂರು:- ಮುಂದಿನ 5 ದಿನ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಭಾರೀ ಚಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ತಿರುಪತಿ ಕಾಲ್ತುಳಿತ: ಸಾವಿನ ಸಂಖ್ಯೆ 7ಕ್ಕೇರಿಕೆ: ಅಸ್ವಸ್ಥರ ಏರ್ಲಿಫ್ಟ್ಗೆ ಸಿಎಂ ಎನ್.ಚಂದ್ರಬಾಬು ಸೂಚನೆ!
ಉತ್ತರ ಕನ್ನಡದಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 4 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗಲಿದೆ, ಬೀದರ್, ಗುಲ್ಬರ್ಗಾ ಮತ್ತು ಗದಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ಇರುವ ಸಾಧ್ಯತೆ ಇದೆ.
ರಾಯಚೂರು, ಗದಗದಲ್ಲಿ ಸಾಮಾನ್ಯಕ್ಕಿಂತ 3-5 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಮಂಡ್ಯಮ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ಇರುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ 11.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.