ರಾಮನಗರ: ಜಿಲ್ಲೆಯಾದ್ಯಂತ ನಿರಂತರ ಮಳೆ ಬೀಳುತ್ತಿರುವ ಕಾರಣ ಹಾಗೂ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದ್ದು, ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಹೋಗಲು ಅನಾನುಕೂಲವಾಗಲಿದೆ. ಆದ ಕಾರಣ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ವಿಪತ್ತು ನಿರ್ವಹಣಾ ಕಾಯ್ದೆ 2005 ಕಲಂ 30 ಹಾಗೂ 34ರ ಪ್ರದತ್ತವಾದ ಅಧಿಕಾರ ಚಲಾಯಿಸಿ,
ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ!
ರಾಮನಗರ ಜಿಲ್ಲೆಯ ಎಲ್ಲಾ ಸರ್ಕಾರಿ/ ಅನುದಾನಿತ/ ಅನುದಾನರಹಿತ ಎಲ್ಲಾ ಶಾಲಾ, ಕಾಲೇಜುಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳಿಗೆ ಡಿ. 3ರ ಮಂಗಳವಾರ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.ಈ ರಜೆ ಅವಧಿಯನ್ನು ಮುಂದೆ ಯಾವುದಾದರೂ ರಜಾ ದಿನದಂದು ಸರಿದೂಗಿಸಿಕೊಳ್ಳಬೇಕೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.