ಬೆಂಗಳೂರು:- ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 1ರ ಬಳಿಕ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಿಗೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಾಡಿಕೆಗಿಂತ ಹೆಚ್ಚಾಗಿ ಮುಂಗಾರು ಮಳೆ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ವರುಣನ ಅವಾಂತರ.. ಮನೆಯ ಶೀಟ್ ಮೇಲಿದ್ದ ಕಲ್ಲು ಬಿದ್ದು 4 ವರ್ಷದ ಬಾಲಕಿ ದುರ್ಮರಣ!
ಇನ್ನು ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ರೆಮಲ್ ಚಂಡಮಾರುತವು ಕರ್ನಾಟಕದ ಮೇಲೆ ಸಹ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆ ಉದ್ಭವಿಸಿತ್ತು. ಇದೀಗ ಹವಾಮಾನ ಇಲಾಖೆ ಈ ಪ್ರಶ್ನೆಗೆ ಉತ್ತರ ನೀಡಿದೆ.
ಕರ್ನಾಟಕ ರಾಜ್ಯಕ್ಕೆ ರೆಮೆಲ್ ಚಂಡಮಾರುತದ ಭೀತಿ ಇಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಪಶ್ಚಿಮ ಬಂಗಾಳ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಮಾತ್ರ ರೆಮಲ್ ಆರ್ಭಟ ಇರಲಿದೆ
ರೆಮಲ್ ಚಂಡಮಾರುತ ತಮಿಳುನಾಡು ಮತ್ತು ಆಂಧ್ರ ಪ್ರದೇಶದ ಕರಾವಳಿ ಭಾಗದಿಂದ ಭಾರೀ ದೂರ ಚಲಿಸಿದೆ. ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯ, ಹಾಗೂ ದಕ್ಷಿಣ ಭಾರತಕ್ಕೆ ಚಂಡಮಾರುತದಿಂದ ಯಾವುದೇ ಪರಿಣಾಮವನ್ನು ಈ ಚಂಡಮಾರುತ ಬೀರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಮೂರ್ನಾಲ್ಕು ದಿನ ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಕೆ ಆಗಲಿದ್ದು, ಅತ್ತ ಕೋಲ್ಕತಾ, ಹಿಮಾಚಲ ಪ್ರದೇಶಗಳಿಗೆ ಚಂಡಮಾರುತದ ಎಫೆಕ್ಟ್ ಸಾಧ್ಯತೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.