ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮುಂದಿನ ಎರಡು ದಿನ ಭರ್ಜರಿ ಮಳೆ ಆಗಲಿದೆ.
MI V/s KKR: ಮುಂಬೈ ವಿರುದ್ಧ 24 ರನ್ಗಳ ಜಯ ಸಾಧಿಸಿದ ಕೋಲ್ಕತ್ತಾ..!
ಬೆಂಗಳೂರು ಗ್ರಾಮಾಂತರದಲ್ಲಿ ಮಳೆ ಸಾಧ್ಯತೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಗೆ ಬೆಂದಿದ್ದ ಬೆಂಗಳೂರಿಗೆ ಮಳೆರಾಯ ತಂಪೆರೆದಿದ್ದಾನೆ. ಹೆಚ್ಚು ಉಷ್ಣಾಂಶದಿಂದ ಕಂಗೆಟ್ಟಿದ್ದ ಜನತೆ ಖುಷಿ ಆಗಿದ್ದಾರೆ. ಇಂದು ಸಹ ಮಳೆಯಾಗಲಿದೆ. ನಿನ್ನೆ ಬೆಂಗಳೂರಿನಲ್ಲಿ ಗಾಳಿ ಸಮೇತ ಮಳೆ ಆಗಿದೆ. ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ಬೆಂಗಳೂರು ಮಹಾನಗರದಲ್ಲಿ 36 ರಿಂದ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಈ ನಡುವೆ ಮಳೆಯಾಗಿದ್ದು ಜನರು ಖುಷಿಪಡುವಂತಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಿಕ್ಕಬಳ್ಳಾಪುರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ ಎಂದು ತಿಳಿಸಿದಾರೆ. ಬೆಂಗಳೂರಲ್ಲೂ ಸಂಜೆ ಬಳಿಕೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ.