ಬೆಂಗಳೂರು:- ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ.17ರಿಂದ ಎರಡು ದಿನಗಳ ಕಾಲ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ವಿಜಯಪುರದಲ್ಲಿ 9.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.
ಎಚ್ಎಎಲ್ನಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 2.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.