ಬೆಂಗಳೂರು:– ಕರ್ನಾಟಕದ ಹಲವೆಡೆ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಡಾ ನಿವೇಶನ ತೃಣಕ್ಕೆ ಸಮ: ಮೊದಲ ಬಾರಿಗೆ ಬಹಿರಂಗ ಪತ್ರ ಬರೆದ CM ಪತ್ನಿ ಪಾರ್ವತಿ!
ಮುಂದಿನ ಒಂದು ವಾರದ ಕಾಲ ಬಿಸಿಲು ಕಾದು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆಲ ದಿನಗಳಲ್ಲಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಧಿಕ ಮಳೆ ಸುರಿದಿದ್ದು, ಇಂದು ಕೂಡ ಉತ್ತಮ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಮಲೆನಾಡಿನ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ, ಈ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಸೋಮವಾರದಂದು ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ತುಮಕೂರು, ರಾಮನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆ ಮತ್ತು ಮೋಡ ಮುಸುಕಿದ ವಾತಾವರಣವಿತ್ತು.
ಹಾವೇರಿ, ಗದಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಹಾಸನ, ರಾಮನಗರ ಜಿಲ್ಲೆಗಳಲ್ಲಿ ಜೋರು ಗಾಳಿ ಸಹಿತ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ.
ಅಲ್ಲದೆ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಾತ್ರ ಗುಡುಗು ಸಹಿತ ಮಳೆಯಾಗುವ ಕಾರಣ, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ.