ಬೆಂಗಳೂರು:- ರಾಜ್ಯದ ಹಲವೆಡೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಳಿಗಿರಿರಂಗನ ಬೆಟ್ಟದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೂಸೈಡ್..!
ಮುಂದೆ ಜೂನ್ 11 ರವರೆಗೆ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೂನ್ 9 ರಿಂದ ಜೂನ್ 11 ರವರೆಗೆ ಭಾರಿ ಮಳೆಯ ಮುನ್ಸೂಚನೆಯನ್ನು ರಾಜ್ಯದ 8 ಜಿಲ್ಲೆಗಳಿಗೆ ನೀಡಲಾಗಿದೆ
ಹೀಗಾಗಿ 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೆಯೇ ಉತ್ತರ ಒಳನಾಡು ಜಿಲ್ಲೆಗಳಾದ ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಈ ಬಾರಿಯ ಮುಂಗಾರಿನ ಬಳಿಕ ಮೊದಲ ಬಾರಿಗೆ ಮಳೆ ಚುರುಕುಗೊಂಡಿದೆ. ಇನ್ನು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೂನ್ 9 ರಿಂದ ಜೂನ್ 11 ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಆದ್ದರಿಂದ ಜೂನ್ 11 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಶಿವಮೊಗ್ಗ, ಕೊಡಗು ಮುಂತಾದ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯನ್ನ ನೀಡಿದೆ
![](https://ainlivenews.com/wp-content/uploads/2024/01/Ad-Banner-copy-scaled.jpg)