ಚೆನ್ನೈ/ಬೆಂಗಳೂರು:- ಡಿ.16 ರವರೆಗೆ ತಮಿಳುನಾಡು, ಕೇರಳ, ಕರ್ನಾಟಕದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುಕೇಶ್ ವಿಶ್ವ ಚೆಸ್ ಚಾಂಪಿಯನ್: 18ನೇ ವಯಸ್ಸಿಗೆ ಈ ಸಾಧನೆ ಮಾಡಿದ ಭಾರತೀಯ!
ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ದಕ್ಷಿಣದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯು ಭಾರೀ ಮಳೆ ಮುನ್ಸೂಚನೆ ಕೊಟ್ಟಿದೆ. ತಮಿಳುನಾಡಿನ 11 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಸಿಕ್ಕಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಡಿಸೆಂಬರ್ 16 ರವರೆಗೆ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು, ವಿವಿಧ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ತಮಿಳುನಾಡಿನ ಕಡಲೂರು, ಮೈಲಾಡುತುರೈ, ನಾಗಪಟ್ಟಿಣಂ, ತಂಜಾವೂರು, ತಿರುವರೂರು ಮತ್ತು ಪುದುಕ್ಕೊಟ್ಟೈ ಸೇರಿದಂತೆ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.