ಬೆಂಗಳೂರು:- ಕರ್ನಾಟಕದ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18ರವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.
ಮಹಿಳೆಯರಿಗೆ ಲೈಂಗಿಕ ಕ್ರಿಯೆಯಲ್ಲಿ ಆಸಕ್ತಿ ಇಲ್ವಾ: ಎಚ್ಚರ.. ಇದು ನಿಮ್ಮ ಜೀವವನ್ನೇ ಬಲಿ ತೆಗೆದುಕೊಳ್ಳಬಹುದು!
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.