ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ ಆಗಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.
ರಾಜ್ಯದ ರೈತರಿಗೆ ಗುಡ್ ನ್ಯೂಸ್: ಬೋರ್ವೆಲ್ ಕೊರಸಲು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 4 ಲಕ್ಷ ಸಬ್ಸಿಡಿ
ನಗರದ ವಿಧಾನ ಸೌಧ, ಕಾರ್ಪೊರೇಷನ್ ಸರ್ಕಲ್, ಶಾಂತಿನಗರ, ರಿಚ್ಮಂಡ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆ ಆಗಿದ್ದು, ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲೂ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಹೆಸರಘಟ್ಟ ಸೇರಿದಂತೆ ಹಲವಾರು ಕಡೆ ಮಳೆ ಆರಂಭವಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿತ್ತು. ಇನ್ನುಳಿದಂತೆ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಎರಡು ದಿನ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿತ್ತು. ಜೊತೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಸೂಚಿಸಲಾಗಿದೆ.