ಬೆಂಗಳೂರು:- ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ದಾವಣಗೆರೆ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಸಾಧ್ಯತೆ ಇದೆ.
ಸೊನ್ನೆ ಸುತ್ತುವುದರಲ್ಲಿ ಅಗ್ರಸ್ಥಾನಕ್ಕೇರಲು ಪೈಪೋಟಿ: ಬ್ಯಾಟಿಂಗ್ ಮರೆತ್ರಾ ಮ್ಯಾಕ್ಸ್ವೆಲ್..?
ಇನ್ನು ಬಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ಹಾವೇರಿ, ಕೊಪ್ಪಳ, ಕೊಡಗು, ಯಾದಗಿರಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲೂ ಮಳೆ ಸಾಧ್ಯತೆಯಿದ್ದು, ಈ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಿಂಚು, ಗುಡುಗು ಸಹಿತ ಬಿರುಗಾಳಿ ಮಳೆ ಮೂನ್ಸೂಚನೆ ನೀಡಿದೆ.
ಸುಡು ಬಿಸಿಲ ಬೇಗೆಯ ಹೊತ್ತಲ್ಲಿ ಅಲ್ಲಲ್ಲಿ ಮಳೆಯಾಗುತ್ತಿರುವುದು ಜನರ ಮುಖದಲ್ಲಿ ಸಂತಸ ಮೂಡಿಸಿದೆ. ಮೈಸೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ದಾಖಲೆಯ ಬಿಸಿಲ ತಾಪಮಾನ ದಾಖಲಾಗಿದ್ದು ಅಚ್ಚರಿ ಮೂಡಿಸಿತ್ತು. ಈ ಸಂದರ್ಭದಲ್ಲಿ ಹಲವೆಡೆ ಮಳೆಯಾಗುತ್ತಿದೆ.