ಬೆಂಗಳೂರು:- ಡಿ.1ರಿಂದ ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಧಿಕ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೇರಳ ಸರ್ಕಾರದ ಮಾದರಿ ಕ್ರಮ: ITI ವಿದ್ಯಾರ್ಥಿನಿಯರಿಗೆ 2 ದಿನ ಮುಟ್ಟಿನ ರಜೆ!
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಯೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್ನಲ್ಲಿ ಒಣಹವೆ ಮುಂದುವರೆಯಲಿದೆ. ಪಣಂಬೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 11.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಚಳಿ ನಿನ್ನೆಗೆ ಹೋಲಿಸಿದರೆ ಕೊಂಚ ಕಡಿಮೆಯಾಗಿದೆ. ಎಚ್ಎಎಲ್ನಲ್ಲಿ 24.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 24.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.