ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜೋರು ಮಳೆ ಆಗುತ್ತಿದ್ದು, ಸವಾರರು ಪರದಾಟ ನಡೆಸಿದ್ದಾರೆ.
ಮಧುಮೇಹಿ ರೋಗಿಗಳೇ ಇಲ್ಲಿ ಕೇಳಿ.. ತೊಂಡೆಕಾಯಿ ಸೇವನೆ ಒಳ್ಳೆಯದಾ ಅಥವಾ ಕೆಟ್ಟದ್ದಾ!?
ನಗರದ ಮಾದನಾಯಕನಹಳ್ಳಿ, ಮಾಕಳಿ, ಮಾಚೋಹಳ್ಳಿ ಸುತ್ತಮುತ್ತ ಗಾಳಿ ಸಹಿತ ಮಳೆ ಆಗಿದ್ದು, ವಾಹನ ಸವಾರರು ಪರದಾಡಿದ್ದಾರೆ.
ನಗರದ ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳ ಹಿಂದೆ ಸುರಿದ ಜೋರು ಮಳೆಗೆ ಬೆಂಗಳೂರು ತತ್ತರಿಸಿತ್ತು. ಧಾರಾಕಾರ ಮಳೆಗೆ ಅವಾಂತರಗಳು ಸೃಷ್ಟಿಯಾಗಿದ್ದವು.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಧಾರವಾಡ, ಬಾಗಲಕೋಟೆ, ಬೆಳಗಾವಿ, ಗದಗ, ಬೀದರ್, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ತುಮಕೂರು, ಮೈಸೂರು, ರಾಮನಗರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ 30 ರಿಂದ 40 ಕಿ.ಮೀ. ವೇಗದಲ್ಲಿ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.