ಬೆಂಗಳೂರು:- ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದರ್ಶನ್ ಬಗ್ಗೆ ಮಾತಾಡೋ ಮುನ್ನ ಆತ ಕೊಟ್ಟಿರುವ ಕೊಡುಗೆ ನೋಡಬೇಕು… ಹಂಸಲೇಖ!
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ. ಹಾಗೂ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ ಹಾಗೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ. ಜೊತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ ಹಾಗೂ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 24 ಗಂಟೆಗಳ ಕಾಲ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರುವ ಸಾಧ್ಯತೆ ಇದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ° C ಮತ್ತು 21 ° C ಆಗಿರಬಹುದು.
ಸಾಮಾನ್ಯವಾಗಿ ಮೋಡ ಕವಿದ ಆಕಾಶ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಇರಲಿದೆ. ಅಲ್ಲದೇ, ಈ ವ್ಯಾಪ್ತಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ