ಬೆಂಗಳೂರು:- ಮುಂದಿನ ಒಂದು ವಾರ ಕರ್ನಾಟಕದ ಹಲವೆಡೆ ಭಾರೀ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ಕೊಟ್ಟಿದೆ.
ಹಿಜ್ಬುಲ್ಲಾ ಬಂಡುಕೋರರ ವಿರುದ್ಧದ ಕಾರ್ಯಾಚರಣೆಯಲ್ಲಿ ಇಸ್ರೇಲ್ ನ 8 ಸೈನಿಕರು ಸಾವು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬುಧವಾರ ಸಂಜೆ ಮಳೆಯಾಗಿದೆ, ಎಚ್ಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.