ಬೆಂಗಳೂರು:- ಕರ್ನಾಟಕದ ಹಲವೆಡೆ ಜೂನ್ 2 ರಿಂದ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಚಾಮರಾಜನಗರ, ಚಿಕ್ಕಮಗಳೂರು,ಕೊಡಗು, ಮೈಸೂರು, ರಾಮನಗರದಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ.
ಮಂಗಳೂರು, ಬೆಳ್ತಂಗಡಿ, ಕೊಟ್ಟಿಗೆಹಾರ, ಮಂಗಳೂರು, ಪಣಂಬೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
ಎಚ್ಎಎಲ್ನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.