ಬೆಂಗಳೂರು:- ನ. 27ರಿಂದ ಕರ್ನಾಟಕದ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಮುಖದ ಮೇಲಿನ ರಂಧ್ರಗಳಿಂದ ನಿಮ್ಮ ಅಂದ ಹದಗೆಟ್ಟಿದ್ಯಾ!? ಹಾಗಿದ್ರೆ ಈ ಟ್ರಿಕ್ ಫಾಲೋ ಮಾಡಿ!
ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ
ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದೆ. ನವೆಂಬರ್ 23ರಂದು ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಳ್ಳುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ