ಬೆಂಗಳೂರು:- ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ವಾರ ಭಾರೀ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಜಾಗ ಬೇಕಾದ್ರೆ ನಾನೇ ಕೊಡಿಸ್ತೀನಿ, ಮೊದಲು ಉದ್ಯೋಗ ಸೃಷ್ಟಿಸಿ: ಮೋದಿಗೆ ಡಿಕೆಶಿ ಸವಾಲ್!
ರಾಜ್ಯ ಹವಾಮಾನ ಇಲಾಖೆಯ ಪ್ರಕಾರ, ಇಂದಿನಿಂದ ಡಿಸೆಂಬರ್ 03ರ ವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಕೊಟ್ಟಿದೆ. ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇನ್ನು ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿತ್ರದುರ್ಗ, ವಿಜಯನಗರ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕೆಲವೊಂದು ಕಡೆಗಳಲ್ಲಿ ತುಂತುರು ಮಳೆ ಸುರಿದಿದ್ದು, ಸದ್ಯ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿದೆ.