ಬೆಂಗಳೂರು:- ನವೆಂಬರ್ 27ರಿಂದ ಕರ್ನಾಟಕದ ಈ ಜಿಲ್ಲೆಯಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬಡ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ: ಶಿಕ್ಷಣ ಇಲಾಖೆಯಿಂದ ಉಚಿತ ನೀಟ್ ಕೋಚಿಂಗ್!
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ದಕ್ಷಿಣ ಅಂಡಮಾನ್ನಲ್ಲಿ ಇಂದು ಚಂಡಮಾರುತ ಪರಿಚಲನೆ ಉಂಟಾಗಲಿದೆ, ಎರಡು ದಿನಗಳಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ.
ಕಾರವಾರದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೀದರ್ ಹಾಗೂ ವಿಜಯಪುರದಲ್ಲಿ 12.05 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಎಚ್ಎಎಲ್ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ