ಬೆಂಗಳೂರು:- ರಾಜ್ಯದ ವಿವಿಧೆಡೆ ಇಂದಿನಿಂದ ಮೂರು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗೆ ಭಾನುವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಸೋಮವಾರವೂ ಕಲಬುರಗಿ ಸೇರಿ ಏಳು ಜಿಲ್ಲೆಗಳಿಗೆ, ಮಂಗಳವಾರ ಉತ್ತರ ಒಳನಾಡಿನ ನಾಲ್ಕು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಬೆಂಗಳೂರಿನಲ್ಲಿ ಭಾನುವಾರ ಹಾಗೂ ಸೋಮವಾರ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಹೇಳಿದೆ.