ಬೆಂಗಳೂರು:- ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ. ಈ ಕುರಿತಾಗಿ ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಪ್ರತಿಕ್ರಿಯಿಸಿದ್ದು, ಪ್ರತಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹೇಳಿದ್ದಾರೆ
ಉತ್ತರ ಕನ್ನಡ ಜಿಲ್ಲೆಯಲ್ಲಿ 23 ಸೆಂ.ಮೀ, ಕಾರವಾರ 22 ಸೆಂ.ಮೀ, ಗೋಕರ್ಣ 20 ಸೆಂ. ಮೀ, ಕುಮಟಾ 20 ಸೆಂ.ಮೀ ಮಳೆಯಾಗಿದೆ. ಉತ್ತರ ಕರ್ನಾಟಕದಲ್ಲಿ 3.1 ರಿಂದ 7.6 ಕಿ.ಮೀ ಎತ್ತರದಲ್ಲಿ ಸುಳಿಗಾಳಿ ಇದ್ದು, ದಿನಾಂಕ 11ರವರೆಗೆ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗಲಿದೆ ಎಂದಿದ್ದಾರೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಕಲಬುರಗಿ, ಉಡುಪಿಯಲ್ಲಿ ಅತ್ಯಂತ ಭಾರಿ ಮಳೆ ಸಾಧ್ಯತೆ ಇದ್ದು, ಹೀಗಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಗದಗ, ಧಾರವಾಡ, ಹಾವೇರಿ, ವಿಜಾಪುರ, ಬಾಗಲಕೋಟೆ, ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆ ಹಿನ್ನೆಲೆ ಇಂದಿನಿಂದ 11ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.