ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಅದರಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ರಾಮನಗರ, ದಲ್ಲಿ ಕೂಡ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮಳೆ ಶುರುವಾಗಿದೆ, ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ, ಮೆಜೆಸ್ಟಿಕ್, ವಿಧಾನಸೌಧ, ಜೆಪಿನಗರ, ರಿಚ್ಮಂಡ್ ವೃತ್ತ, ಟೌನ್ಹಾಲ್ ಸೇರಿದಂತೆ ಬಹುತೇಕ ಕಡೆ ಮಳೆಯಾಗಿದೆ.
ಇನ್ನೂ ಎಚ್ಎಎಲ್ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.