ಬೆಂಗಳೂರು:– ಕರ್ನಾಟಕದ 8 ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ
ಹೆಂಡತಿ ಮೇಲೆ ಅನುಮಾನ: ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಗಂಡನ ಚಿತ್ರಹಿಂಸೆ!
ಇನ್ನು ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ 28 ಮತ್ತು 20 ಡಿ.ಸೆ ಇರಲಿದೆ.
ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ